ಬಳ್ಳಾರಿ: ರಾಜ್ಯದಲ್ಲಿನ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಕುಟುಂಬ ರಾಜಕಾರಣದಲ್ಲಿ ಮುಳುಗಿವೆ. ಅವುಗಳಿಂದ ನೀವು ರಾಜ್ಯದ ಅಭಿವೃದ್ಧಿ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ನೀವು ಜೆಡಿಎಸ್‌ಗೆ ಮತ ನೀಡಿದರೆ ಕಾಂಗ್ರೆಸ್‌ಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಎಟಿಎಂ ಆಗುವ ಸರ್ಕಾರಕ್ಕೆ ಎಂದು ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಕುಟುಕಿದರು.
ಸಂಡೂರಿನ ಎಸ್‌ಆರ್‌ಎಸ್ ಶಾಲೆಯ ಮೈದಾನದಲ್ಲಿ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಯಡಿಯೂರಪ್ಪ ಮುಂದಾಳತ್ವದ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಲು ಶ್ರಮಿಸಿ ಎಂದು ಕರೆಕೊಟ್ಟರು.