ಜೆಡಿಎಸ್, ಕೋಮುವಾದಿಗಳ ಜೊತೆ ಮೈತ್ರಿ ಮಾಡಿಕೊಳ್ಳಬಾರದು…

0
14

ಹುಬ್ಬಳ್ಳಿ: ಜಾತ್ಯಾತೀತ ಅಂತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿಗೆ ಮುಂದಾಗಿರುವುದು ದುರ್ದೈವದ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ಹರಿ ಹಾಯ್ದರು.
ಹುಬ್ಬಳ್ಳಿ ವಿಮಾನ ನಿಲ್ದಾದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಅವರು ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ‌ ಎಂದಿದ್ದರು. ಆದ್ರೆ ಇದೀಗ ಬಿಜೆಪಿವರ ಜೊತೆ ಸೇರಿ‌ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕಾಗಿ ಯಾರ ಜೊತೆಯಾದರೂ ಜೆಡಿಎಸ್‌ನವರು ಸೇರಿಕೊಳ್ಳುತ್ತಾರೆ ಎಂಬುದು ಸಾಬೀತಾಗಿದೆ ಎಂದು ಹರಿಹಾಯ್ದರು.
ಜಿ 20 ಗೆ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಆಹ್ವಾನ ಮಾಡದಿರುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಅವರು ವಿಪಕ್ಷ ನಾಯಕರು. ಅವರನ್ನ ಆಹ್ವಾನ‌ ಮಾಡದಿರುವುದು ತಪ್ಪು ಎಂದರು.
ಮಹದಾಯಿ, ಕೃಷ್ಣಾ ,‌ ಕಾವೇರಿ‌ ಸೇರಿದಂತೆ ಹಲವು ವಿಚಾರದ ಬಗ್ಗೆ ಪ್ರಧಾನಿಗೆ ಪತ್ರ ಬರೆದಿದ್ದೇನೆ. ಕೇಂದ್ರ ಸರ್ಕಾರ ಅರಣ್ಯ ಮತ್ತು ಎನ್ವಿರಾನಮೆಂಟ್ ಕ್ಲಿಯರೆನ್ಸ್ ಕಳಿಸಿಲ್ಲ. ಮೊದಲು ಕೇಂದ್ರ ಸರ್ಕಾರ ಕ್ಲಿಯರೆನ್ಸ್ ಕಳಿಸಲಿ. ನಾವು ಪ್ರಧಾನಿಯವರಿಗೆ ಸಮಯ ಕೇಳಿದ್ದೇವೆ. ನಿಯೋಗದೊಂದಿಗೆ ಬರುತ್ತೇವೆ ಅಂತಾ ಪ್ರಧಾನಿಗಳಿಗೆ ಪತ್ರ ಬರೆದಿದ್ದೇವೆ. ಆದ್ರ ಈವರೆಗೂ ಅವರಿಂದ ಉತ್ತರ ಬಂದಿಲ್ಲ ಎಂದರು.

Previous articleನಮ್ಮೂರ ಮಹಾತ್ಮೆ
Next articleಐತಿಹಾಸಿಕ ಸಾಧನೆಯ ಹೊಸ್ತಿಲಲ್ಲಿ ಎಡವಿದ ಬೋಪಣ್ಣ-ಎಬ್ಡೆನ್ ಜೋಡಿ