Home ನಮ್ಮ ಜಿಲ್ಲೆ ಕಲಬುರಗಿ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ಕೇದಾರಲಿಂಗಯ್ಯ

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ಕೇದಾರಲಿಂಗಯ್ಯ

0

ಕಲಬುರಗಿ: ಜೆಡಿಎಸ್ ರಾಜ್ಯ ಕಾರ್ಯದರ್ಶಿಯಾಗಿದ್ದ ಹಾಗೂ ರೈತ ಹೋರಾಟಗಾರ ಕೇದಾರಲಿಂಗಯ್ಯ ಹಿರೇಮಠ ಅವರನ್ನು ಮಾಜಿ ಸಚಿವ ರಾಮಲಿಂಗ ರೆಡ್ಡಿ ಹಾಗೂ ಶಾಸಕ ಡಾ.‌ಅಜಯಸಿಂಗ್ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದರು. ಇಲ್ಲಿನ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯ ಲ್ಲಿ ಸರಳ ಸಮಾರಂಭದಲ್ಲಿ ಪಕ್ಷದ ಧ್ವಜ ಕೊಟ್ಟು ಬರಮಾಡಿಕೊಳ್ಳಲಾಯಿತು. ಈ ವೇಳೆ ಸ್ವಾಗತಿಸಿ ಮಾತನಾಡಿದ ರಾಮಲಿಂಗ ರಡ್ಡಿ ,ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎದ್ದಿದೆ. ಶ್ರಮಿಕ ವರ್ಗ, ಕಾರ್ಮಿಕ ಮತ್ತು ರೈತರ ಪರ ಉತ್ತಮ ಆಡಳಿತ ನೀಡಲಿದೆ. ಜಿಲ್ಲೆಯ ಎಲ್ಲ ೯ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ತಂದುಕೊಡಬೇಕು ಎಂದರು. ಕೇಂದ್ರ ‌ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯಿಂದ ಬಡವರ‌ ಮತ್ತಷ್ಟು ಬಡತನಕ್ಕೆ ದೂಡಿದೆ. ಕೇಂದ್ರದಲ್ಲಿ ೯ ವರ್ಷಗಳ ಬಿಜೆಪಿ ಆಡಳಿತದಿಂದ ಇನ್ನು ೨೦ ಕೋಟಿ ಜನ ಬಡತನ ರೇಖೆಗಿಂತ ಕೆಳಗೆ ಇಳಿದಿದ್ದಾರೆ. ಅದೇ ಮನಮೋಹನ್ ಸಿಂಗ್ ಸರ್ಕಾರದಲ್ಲಿ ೨೩ ಕೋಟಿ ಜನ ಬಡವರು ಬಡತನ ರೇಖೆಗಿಂತ ಮೇಲೆ ಬಂದಿದ್ದರು ಎಂದರು.

Exit mobile version