ಬೀದರ್ : ಜೋಳದ ರೊಟ್ಟಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದರು. ಬೀದರ್ ಜಿಲ್ಲೆಯ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಚೀನಕೇರಾ ಗ್ರಾಮದ ಬಳಿ ಶನಿವಾರ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಸಭೆಯನ್ನುದೇಶಿಸಿ ಮಾತನಾಡಿದ ಅವರು ಇದರಿಂದಾಗಿ ರೈತರ ಆದಾಯದಲ್ಲಿ ಭಾರಿ ವೃದ್ಧಿಯಾಗಲಿದೆ ಎಂದು ಪ್ರತಿಪಾದಿಸಿದರು. ರಾಷ್ಟ್ರದಲ್ಲಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳ ಒಟ್ಟು ೧೦ ಸಾವಿರ ಕೋಟಿ ರೂ.ಗಳ ಸಾಲಮನ್ನಾ ಮಾಡಲು ಪರಿಶೀಲಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಕಾಂಗ್ರೆಸ್ಸಿಗರು ಎಷ್ಟೇ ಕೆಸರು ಎರಚಿದಷ್ಟು ಕಮಲ ಅರಳುತ್ತದೆ ಎಂದು ನುಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.