Home ತಾಜಾ ಸುದ್ದಿ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಹುದ್ದೆಗೆ ಚೇತನ್ ಶರ್ಮಾ ರಾಜೀನಾಮೆ

ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಹುದ್ದೆಗೆ ಚೇತನ್ ಶರ್ಮಾ ರಾಜೀನಾಮೆ

0

ಮುಂಬೈ: ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಚೇತನ್‌ ಶರ್ಮಾ ರಾಜೀನಾಮೆ ನೀಡಿದ್ದಾರೆ.
ಮಾಧ್ಯಮವೊಂದರ ರಹಸ್ಯ ಕಾರ್ಯಾಚರಣೆಯಲ್ಲಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಹಾಗೂ ಭಾರತ ಪುರುಷರ ಕ್ರಿಕೆಟ್‌ ತಂಡಕ್ಕೆ ಸಂಬಂಧಿಸಿದಂತೆ ಹಲವು ಒಳಗುಟ್ಟುಗಳನ್ನು ಬಹಿರಂಗಪಡಿಸಿ ಸಂಕಷ್ಟಕ್ಕೆ ಸಿಲುಕಿರುವ ಚೇತನ್‌ ಇಂದು ರಾಜೀನಾಮೆ ನೀಡಿದ್ದಾರೆ.
ರಹಸ್ಯ ಕಾರ್ಯಾಚರಣೆಯಲ್ಲಿ ಭಾರತ ತಂಡದ ಕೆಲ ಆಟಗಾರರು ಫಿಟ್ನೆಸ್‌ ಸಾಬೀತಿಗೆ ಇಂಜೆಕ್ಷನ್‌ ತೆಗೆದುಕೊಳ್ಳುತ್ತಾರೆ ಎಂದಿದ್ದರಲ್ಲದೇ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ವಿರುದ್ಧವೂ ಗಂಭೀರ ಆರೋಪ ಮಾಡಿದ್ದರು.

Exit mobile version