Home ತಾಜಾ ಸುದ್ದಿ ಟ್ವಿಟರ್ ಅರ್ಜಿ ವಜಾ: ₹ 50 ಲಕ್ಷ ದಂಡ

ಟ್ವಿಟರ್ ಅರ್ಜಿ ವಜಾ: ₹ 50 ಲಕ್ಷ ದಂಡ

0

ಬೆಂಗಳೂರು: ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ಟ್ವಿಟ್ಟರ್‌ಗೆ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್ ಇಂದು ಟ್ವಿಟ್ಟರ್ ಅರ್ಜಿಯನ್ನು ವಜಾ ಮಾಡಿದ್ದು ಟ್ವಿಟ್ಟರ್ ಗೆ 50 ಲಕ್ಷ ರೂ ದಂಡ ವಿಧಿಸಿದೆ.
ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeiTY) ತನಗೆ ಹೊರಡಿಸಿದ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಸಂಸ್ಥೆಯು ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾ.ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಇಂದು ಪ್ರಕಟಿಸಿತು. ಟ್ವೀಟ್‌ಗಳನ್ನು ಮತ್ತು ಟ್ವಿಟ್ಟರ್ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿದೆ ಎಂದು ಸರ್ಕಾರದ ಪರ ವಕೀಲರ ವಾದದಿಂದ ಪೀಠಕ್ಕೆ ಮನವರಿಕೆಯಾಗಿದೆ ಎಂದು ಹೇಳಿದೆ.

Exit mobile version