ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಆಗ್ರಹ

0
39

ಶ್ರೀರಂಗಪಟ್ಟಣ: ಒಕ್ಕಲಿಗ ನಾಯಕ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲೇಬೇಕು ಎಂದು ಶ್ರೀರಂಗಪಟ್ಟಣದಲ್ಲಿ ಒಕ್ಕಲಿಗ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಶ್ರೀರಂಗಪಟ್ಟಣದ ಕುವೆಂಪು ವೃತ್ತದ ಬಳಿ ಪ್ರತಿಭಟನೆ ನಡೆಸಿದ ಒಕ್ಕಲಿಗ ಮುಖಂಡರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತ್ಯಧಿಕ ಸ್ಥಾನ ಬರಲು ಡಿ.ಕೆ.ಶಿವಕುಮಾರ್ ಕಾರಣ. ಇದೀಗ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡದೆ ಸಿದ್ದರಾಮಯ್ಯರವರಿಗೆ ನೀಡಲು ಮುಂದಾಗಿದೆ. ಇದು ಸರಿಯಲ್ಲ. ಇದೇ ಅಂತಿಮ ತೀರ್ಮಾನವಾದರೆ ಕಾಂಗ್ರೆಸ್ ಹೈಕಮಾಂಡ್‌ಗೆ ಮುಂದಿನ ದಿನಗಳಲ್ಲಿ ಒಕ್ಕಲಿಗರು ತಕ್ಕ ಬುದ್ದಿ ಕಲಿಸುವುದಾಗಿ ಎಚ್ಚರಿಕೆ ನೀಡಿದರು.

Previous articleಬಲರಾಮನಿಗೆ ಶ್ರದ್ಧಾಂಜಲಿ
Next articleಮುಖ್ಯಮಂತ್ರಿ ಆಯ್ಕೆ ತೀರ್ಮಾನ ಅಂತಿಮವಾಗಿಲ್ಲ: ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ