Home ತಾಜಾ ಸುದ್ದಿ ಡಿಕೆಶಿ ಸುಮ್ಮನೆ ಹೆಸರುಗಳನ್ನು ತೇಲಿ ಬಿಡುತ್ತಿದ್ದಾರೆ ಅಷ್ಟೆ

ಡಿಕೆಶಿ ಸುಮ್ಮನೆ ಹೆಸರುಗಳನ್ನು ತೇಲಿ ಬಿಡುತ್ತಿದ್ದಾರೆ ಅಷ್ಟೆ

0

ಬೆಂಗಳೂರು: ಪಕ್ಷಾಂತರದಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಯನೂರು ಮಂಜುನಾಥ್ ಬಂಡಾಯ, ಶಾಸಕರು ಪಕ್ಷಾಂತರ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 125 ಶಾಸಕರು ಈಗ ಇದ್ದಾರೆ.
ಅದರಲ್ಲಿ ಕೆಲವು ಕಡೆ ಇಬ್ಬರು ಆಕಾಂಕ್ಷಿಗಳು ಇದ್ದಾರೆ. ಅಲ್ಲಿ ಸ್ಥಾನ ದೊರೆಯೋಲ್ಲ ಎಂದು ಕೆಲವರು ಬಿಟ್ಟು ಹೋಗಿದ್ದಾರೆ ಅಷ್ಟೆ. ಇದರಿಂದ ಬಿಜೆಪಿ ಹಾಗೂ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. ಬಿಜೆಪಿಯಿಂದ ಮತ್ತೆ ಯಾರು ಹೋಗೊಲ್ಲ. ಡಿ.ಕೆ.ಶಿವಕುಮಾರ್ ಸುಮ್ಮನೆ ಹೆಸರುಗಳನ್ನು ತೇಲಿ ಬಿಡುತ್ತಿದ್ದಾರೆ ಅಷ್ಟೆ ಎಂದರು.

Exit mobile version