ಶ್ರೀರಂಗಪಟ್ಟಣ: ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಶ್ರೀರಂಗಪಟ್ಟಣದಲ್ಲಿ ರೈತರು ಒಣಗಿದ ಕಬ್ಬಿನ ಜೊಲ್ಲೆ ಹಿಡಿದು ಪ್ರತಿಭಟನೆ ನಡೆಸಿದರು. ಭೂಮಿತಾಯಿ ಹೋರಾಟ ಸಮಿತಿ ವತಿಯಿಂದ ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ನೇತೃತ್ವದಲ್ಲಿ ಪಟ್ಟಣದ ಸ್ನಾನಘಟ್ಟ ಬಳಿಯ ಕಾವೇರಿ ನದಿಯಿಂದ ಕಬ್ಬಿನ ಜೊಲ್ಲೆ ಹಿಡಿತು ತಾಲ್ಲೂಕು ಕಚೇರಿವರಗೆ ಪ್ರತಿಭಟನಾ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೀರಾವರಿ ಸಚಿವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ತಾಲ್ಲೂಕು ಕಚೇರಿ ಎದುರು ಒಂದು ಘಂಟೆಗೂ ಅಧಿಕ ಸಮಯ ಪ್ರತಿಭಟನೆ ನಡೆಸಿ, ನಮ್ಮ ನೀರನ್ನು ರಕ್ಷಿಸದ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ. ಒಂದು ವೇಳೆ ಮಳೆಯೇನಾದರೂ ಆಗದಿದ್ದರೆ ಮುಂದಿನ ದಿನಗಳಲ್ಲಿ ರೈತರೆಲ್ಲರೂ ಸಾಮೂಹಿಕ ಆತ್ಮಹತ್ಯೆಯ ಹಾದಿ ಹಿಡಿಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.