ತಮಿಳುನಾಡಿಗೆ ನೀರು: ವಿವಿಧ ಸಂಘಟನೆಗಳಿಂದ ಆಕ್ರೋಶ

0
31

ಶ್ರೀರಂಗಪಟ್ಟಣ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳಿಂದ ಉರುಳು ಸೇವೆ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.
ಪಟ್ಟಣದ ಅಂಬೇಡ್ಕರ್ ಪ್ರತಿಮೆ ವೃತ್ತದಿಂದ ತಾಲೂಕು ಕಚೇರಿವರೆಗೂ ಉರುಳು ಸೇವೆ ಮಾಡಿದ ವಿಕಲಚೇತನ ಮರಗಾಲ ಮಂಜುನಾಥ್ ಹಾಗೂ ಗೋವಿಂದೇಗೌಡ ಕೂಡಲೇ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿದರು.
ಕರವೇ, ದಸಂಸ, ರೈತಸಂಘ, ಪ್ರಜ್ಞಾವಂತರ ವೇದಿಕೆ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಭಾಗವಹಿಸಿ‌‌ ತಾಲೂಕು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಮುಖಂಡರು, ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Previous articleಏಷ್ಯಾಕಪ್​ ಪಂದ್ಯಾವಳಿಗೆ ಭಾರತ ತಂಡ ಪ್ರಕಟ
Next articleಬೃಂದಾವನದ ಸೊಬಗು ನೊಡಲು ಬಂದ 5 ಜನಕ್ಕೆ ಕಚ್ಚಿದ ನಾಯಿ