Home ತಾಜಾ ಸುದ್ದಿ ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ

ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ

0
ಡಿ.ಕೆ. ಶಿವಕುಮಾರ್

ಬೆಂಗಳೂರು: ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ. ಅವರೂ ನಮ್ಮ ಅಣ್ಣತಮ್ಮಂದಿರಂತೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಮೇಕೆದಾಟು ಯೋಜನೆಗೆ ಹಿಂದಿನ ಸರ್ಕಾರ ಒಂದು ಸಾವಿರ ಕೋಟಿ ರೂ. ಘೋಷಿಸಿದೆ ಆದರೆ ಖರ್ಚು ಮಾಡಿಲ್ಲ. ಯೋಜನೆಯನ್ನು ಸಾಕಾರಗೊಳಿಸಲು ಆ ಹಣ ಬಳಕೆಯಾಗಲಿದೆ ಎಂದಿದ್ದಾರೆ.
ʼಕರ್ನಾಟದಲ್ಲಿ ನೆಲೆಸಿರುವ ತಮಿಳಿಗರು ಹಾಗೂ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಕಾವೇರಿ ನೀರು ಕುಡಿಯುತ್ತಿದ್ದಾರೆ. ಕೋರ್ಟು, ಕಚೇರಿ ಅಲೆದದ್ದು ಸಾಕು. ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ಕಾವೇರಿ ಪಾತ್ರದಲ್ಲಿರುವ ರೈತರಿಗೆ ನೀರಾವರಿ ಹಾಗೂ ಶ್ರೀಸಾಮಾನ್ಯರಿಗೆ ಕುಡಿಯುವ ನೀರು ಎರಡೂ ಲಭಿಸಲಿದೆ.
ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ. ನಿಮ್ಮಲ್ಲಿ ಹೃದಯ ಶ್ರೀಮಂತಿಕೆ ಇದೆ, ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣʼ ಎಂದು ಬರೆದುಕೊಂಡಿದ್ದಾರೆ.

Exit mobile version