ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಶಿಕ್ಷಕ

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಶಿಕ್ಷಣ ಇಲಾಖೆ ಈ ಮೊದಲು ಪ್ರಕಟಿಸಿದ್ದ 1:1 ಆಯ್ಕೆ ಪಟ್ಟಿಯಲ್ಲಿ ವಿವಾಹಿತ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡದ ಕಾರಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ತರಲಾಗಿತ್ತು.