Home ತಾಜಾ ಸುದ್ದಿ ತೆನೆ ಇಳಿಸಿ ಕೈ ಹಿಡಿದ ಶ್ರೀನಿವಾಸ್

ತೆನೆ ಇಳಿಸಿ ಕೈ ಹಿಡಿದ ಶ್ರೀನಿವಾಸ್

0
Gubbi

ಬೆಂಗಳೂರು: ಗುಬ್ಬಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ಜೆಡಿಎಸ್‌ ಪಕ್ಷ ತೊರೆದು ಗುರುವಾರ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದರು. ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುಬ್ಬಿ ಶ್ರೀನಿವಾಸ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್‌, ‘ಶ್ರೀನಿವಾಸ್‌ ಅವರ ಸೇರ್ಪಡೆಯಿಂದ ತುಮಕೂರು ಮಾತ್ರವಲ್ಲ ಹಲವು ಜಿಲ್ಲೆಗಳಲ್ಲಿ ಪಕ್ಷಕ್ಕೆ ಬಲ ಬಂದಿದೆ. ಅವರೊಬ್ಬ ನಿಷ್ಠಾವಂತ ಜನಸೇವಕ. ಅವರು ಪಕ್ಷದ ಸಿದ್ಧಾಂತದ ಮೇಲೆ ನಂಬಿಕೆ ಇರಿಸಿ ಬಂದಿದ್ದಾರೆ’ ಎಂದರು. ನಾನು ಮೂಲತಃ ಕಾಂಗ್ರೆಸ್‌ ಪಕ್ಷದವನು. ಈಗ ಬಿಜೆಪಿ ಸೇರಲು ಇಷ್ಟ ಆಗಲಿಲ್ಲ. ಆದ್ದರಿಂದ ಕಾಂಗ್ರೆಸ್‌ ಪಕ್ಷಕ್ಕೆ ಬಂದಿದ್ದೇನೆ’ ಎಂದರು. ಮೂಡಿಗೆರೆ ಪುರಸಭೆಯ ಮಾಜಿ ಅಧ್ಯಕ್ಷ ಹಾಲಪ್ಪ ಮತ್ತು ಮಂಡ್ಯದ ಮುಖಂಡ ಸತ್ಯಾನಂದ ಕೂಡ ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷ ಸೇರಿದರು.

Exit mobile version