ದಲಿತರನ್ನು ಮತ ಬ್ಯಾಂಕ್ ಮಾಡಿಕೊಂಡ ರಾಜಕೀಯ ಪಕ್ಷಗಳಿಂದ ಉದ್ಧಾರವೆಂಬುದು ಅಸಾಧ್ಯ

0
28

ಬೆಂಗಳೂರು: ದಲಿತರನ್ನು ಮತ ಬ್ಯಾಂಕ್ ಮಾಡಿಕೊಂಡ ರಾಜಕೀಯ ಪಕ್ಷಗಳಿಂದ ಉದ್ಧಾರವೆಂಬುದು ಅಸಾಧ್ಯ. ಈ ಹಿನ್ನೆಲೆಯಲ್ಲಿ ದಲಿತರಿಂದ ದಲಿತರಿಗಾಗಿಯೇ ಹೊಸ ಪಕ್ಷವೊಂದನ್ನು ಸ್ಥಾಪಿಸಲು ಇದೀಗ ಡಿಎಸ್‌ಎಸ್ ಅಂಬೇಡ್ಕರ್ ವಾದ ರಾಜ್ಯ ಸಮಿತಿ ನಿರ್ಧರಿಸಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಾ.ಎನ್.ಮೂರ್ತಿ, ಇದೇ ೧೪ ರಂದು ಡಾ.ಅಂಬೇಡ್ಕರ್ ಭವನದಲ್ಲಿ ದಲಿತ ಸಂಘರ್ಷ ಸಮಿತಿ ರಾಜ್ಯ ಸಮ್ಮೇಳನ ಮತ್ತು ರಾಷ್ಟ್ರೀಯ ನೂತನ ಪಕ್ಷ ಉದ್ಘಾಟನೆ ನಡೆಯಲಿದೆ ಎಂದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷಗಳಾದರೂ ಇಲ್ಲಿಯವರೆಗೆ ದಲಿತ ಹಿಂದುಳಿದ ವರ್ಗದವರಿಗೆ ಆರ್ಥಿಕ ಸಾಮಾಜಿಕ ಅಸಮಾನತೆ ಮತ್ತು ಶೋಷಣೆ ತಪ್ಪಿಲ್ಲ. ಆದುದರಿಂದ ನಮ್ಮ ಜನರ ಸರ್ವಾಂಗೀಣ ಅಭಿವೃದ್ಧಿಗೆ ರಾಜಕೀಯ ಪಕ್ಷವೊಂದರ ಅತ್ಯಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.

Previous articleಬಾದಾಮಿ ಮತಕ್ಷೇತ್ರದ ಸಿದ್ದರಾಮಯ್ಯ ಬೆಂಬಲಿಗರು ಆಪ್‌ಗೆ ಸೇರ್ಪಡೆ
Next articleನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ – ವಾರಾಹಿ ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ!