ದೆಹಲಿಯ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಲೋಕ ಕಲ್ಯಾಣ ಮಾರ್ಗದಲ್ಲಿ ಪ್ರಧಾನಿ ಮೋದಿ ಕೌಂಟರ್ನಲ್ಲಿ ಟಿಕೆಟ್ ಟೋಕನ್ ಪಡೆದು ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು. ದೆಹಲಿ ಮೆಟ್ರೋದಲ್ಲಿ ಸಾಮಾನ್ಯರಂತೆ ಕುಳಿತು ಪ್ರಧಾನಿ ಮೋದಿ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. ಪಿಎಂ ಮೋದಿ ಅವರು ಕಂಪ್ಯೂಟರ್ ಸೆಂಟರ್ ಮತ್ತು ಫ್ಯಾಕಲ್ಟಿ ಆಫ್ ಟೆಕ್ನಾಲಜಿಯಲ್ಲಿನ ಅಕಾಡೆಮಿಕ್ ಬ್ಲಾಕ್‌ಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
