ದೇವೇಗೌಡರ ನಿರ್ಧಾರದಿಂದಾದರೂ ಪ್ರೇರಣೆ ಪಡೆಯಲಿ

0
21

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಪ್ರಧಾನಮಂತ್ರಿಗಳಗೆ ಮಾಜಿ ಪ್ರಧಾನಿ ದೇವೆಗೌಡ ಅವರು ಪತ್ರ ಬರೆದಿದ್ದನ್ನು ಸ್ವಾಗತಿಸಿ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರು ಪೋಸ್ಟ್‌ ಮಾಡಿದ್ದು. “ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ದೇವೆಗೌಡ ಅವರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ.
ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ.
ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ.
ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ.ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನಿ ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ.
ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ ಎಂದಿದ್ದಾರೆ.

Previous articleಸಾರ್ವಜನಿಕರು-ಅಧಿಕಾರಿಗಳ ಎದುರೇ ಸಂಸದ ಮತ್ತು ಶಾಸಕರ ಮಧ್ಯೆ ಹೊಡೆದಾಟ
Next articleಕಾವೇರಿಗಾಗಿ ಉತ್ತರ ಕರ್ನಾಟಕವೂ ನಿಮ್ಮ ಜೊತೆ ನಿಲ್ಲಲಿದೆ