ದೇಶದಲ್ಲಿ ಭಯೋತ್ಪಾದನೆ ಬೆಳೆಸಿದ್ದೇ ಕಾಂಗ್ರೆಸ್: ಕಟೀಲ್

0
16
ನಳೀನಕುಮಾರ ಕಟೀಲ್

ಬೆಳಗಾವಿ: ಕಾಂಗ್ರೆಸ್‌ನಿಂದ ದೇಶದಲ್ಲಿ ಭ್ರಷ್ಟಾಚಾರ, ಭಯೋತ್ಪಾದನೆ ಸೃಷ್ಟಿಯಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನಕುಮಾರ ಕಟೀಲ ಹೇಳಿದರು.
ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮದಭಾವಿ ಗ್ರಾಮದಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, 75 ವರ್ಷಗಳಲ್ಲಿ 60 ವರ್ಷ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ದೇಶದ ತುಂಬೆಲ್ಲ ಭ್ರಷ್ಟಾಚಾರ, ಭಯೋತ್ಪಾದನೆ ಸ್ಥಾಪನೆ ಮಾಡಿ ದೇಶವನ್ನು ದಿವಾಳಿ ಮಾಡಿದ್ದರು. ಸದ್ಯ ಕಾಂಗ್ರೆಸ್ ಪಕ್ಷ ಮುಳುಗುವ ಹಡಗಾಗಿದೆ. ಇದರ ಪಿತಾಮಹ ಸಿದ್ದರಾಮಯ್ಯ ಎಂದು ಕಟೀಲ್ ಕುಟುಕಿದರು.
2023ರ ವಿಧಾನಸಭೆ ಹಾಗೂ 2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಹಾಗೂ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ ಕಾಂಗ್ರೆಸ್ ಮುಕ್ತ ಭಾರತವಾಗಲಿದೆ.

Previous articleಪಿಎಫ್‌ಐ ನಿಷೇಧ ಸ್ವಾಗತ, ಮದರಸಾ ಬ್ಯಾನ್ ಮಾಡಿ: ಮುತಾಲಿಕ್
Next articleಕನ್ನಡ ಭವನಕ್ಕೆ ಜಾಗ ನೀಡಲು ಡಾ ಸಾವಂತ್‌ಗೆ ಬೊಮ್ಮಾಯಿ ಪತ್ರ