ಕೇರಳ: ದೇಶದ ಮೊದಲ ವಾಟರ್ ಮೆಟ್ರೋಗೆ ಪ್ರಧಾನಿ ನರೇಂದ್ರ ಮೋದಿ ಇಂದು ಕೊಚ್ಚಿಯಲ್ಲಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ವಾಟರ್ ಮೆಟ್ರೋ ಯೋಜನೆಯ ಒಟ್ಟು ವೆಚ್ಚ 1,137 ಕೋಟಿ ರೂ.ಯದ್ದಾಗಿದೆ. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳ ಸುತ್ತ ಈ ಮೆಟ್ರೋ ಸಂಚಾರ ಮಾಡಲಿದೆ. 38 ಟರ್ಮಿನಲ್‌ಗಳ ಮೂಲಕ ಪ್ರಯಾಣಿಕರಿಗೆ ಸೇವೆ ನೀಡಲಿದೆ. ಈ ವಾಟರ್ ಮೆಟ್ರೋ ಯೋಜನೆಯು 78 ಕಿ.ಮೀ. ವ್ಯಾಪಿಸಿದ್ದು ಇಲ್ಲಿನ ದ್ವೀಪಗಳಲ್ಲಿ ವಾಸಿಸುವ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಅನುಕೂಲವಾಗಲಿದೆ ಎಂದರು.
ಇದಕ್ಕೂ ಮುನ್ನ ಪ್ರಧಾನಿ ಮೋದಿ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್‌ನಲ್ಲಿ ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು.
ಕೇರಳದ ಮೊದಲ ವಂದೇ ಭಾರತ್ ರೈಲು ರಾಜಧಾನಿ ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶ್ಯೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು, ಕಾಸರಗೋಡು ಹೀಗೆ ಒಟ್ಟು 11 ಜಿಲ್ಲೆಗಳಲ್ಲಿ ಸಂಚರಿಸಲಿದೆ.