Home ತಾಜಾ ಸುದ್ದಿ ಧಾರವಾಡ ಪ್ರವೇಶಕ್ಕೆ ವಿನಯ ಕುಲಕರ್ಣಿಗಿಲ್ಲ ಅನುಮತಿ

ಧಾರವಾಡ ಪ್ರವೇಶಕ್ಕೆ ವಿನಯ ಕುಲಕರ್ಣಿಗಿಲ್ಲ ಅನುಮತಿ

0

ಧಾರವಾಡ ಜಿಲ್ಲೆ ಪ್ರವೇಶಿಸಲು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕೋರ್ಟ್​ ಅನುಮತಿ ನೀಡಿಲ್ಲ. ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್, ಉಪಮೇಯರ್‌ ಚುನಾವಣೆ ಹಿನ್ನೆಲೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿ ಶಾಸಕ ವಿನಯ್ ಕುಲಕರ್ಣಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಕೋರ್ಟ್‌ ಅದನ್ನು ತಿರಸ್ಕರಿಸಿದೆ.
ನಾಳೆ ಜೂ. 20 ರಂದು ಹು-ಧಾ ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ. ಹೀಗಾಗಿ ಶಾಸಕರಾಗಿರುವ ವಿನಯ್ ಕುಲಕರ್ಣಿ ಮತದಾನ ಮಾಡುವ ಹಕ್ಕನ್ನು ಹೊಂದಿದ್ದಾರೆ. ಈ ಕಾರಣಕ್ಕಾಗಿ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

Exit mobile version