ಬೆಂಗಳೂರು : ಕರ್ನಾಟಕ ಹಾಲು ಮಾರಾಟ ಮಹಾಮಂಡಳದ (KMF) ನೂತನ ಅಧ್ಯಕ್ಷರಾಗಿ, ಅವಿರೋಧವಾಗಿ ಆಯ್ಕೆಯಾದ ಭೀಮಾ ನಾಯ್ಕ್ ಅವರು ನಂದಿನ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳಕ್ಕೆ ಈಗಾಗಲೇ ಸರ್ಕಾರಕ್ಕೆ ಬೇಡಿಕೆ ಇಡಲಾಗಿದೆ ಎಂದು ಹೇಳಿದರು. ದರ ಹೆಚ್ಚಳ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಬಳಿ ಚರ್ಚಿಸಲಾಗುವುದು, ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೆಎಂಎಫ್ ಅಧ್ಯಕ್ಷರಾಗಿ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಹಿರಿಯರ ಶ್ರಮದಿಂದ ಈ ಮಟ್ಟಕ್ಕೆ ಬಂದು ನಿಂತಿದೆ. ಸರ್ಕಾರದ ಮಾರ್ಗದರ್ಶನದ ಜತೆಗೆ ರೈತರು, ಗ್ರಾಹಕರ ಸಹಕಾರ ಕೋರುತ್ತೇನೆ. ನಂದಿನಿ ಹಾಲು ರಾಷ್ಟ್ರಮಟ್ಟದ ಬ್ರಾಂಡ್ ಆಗಿದೆ. ಖಾಸಗಿಯವರಿಗೆ ಸ್ಪರ್ಧೆ ನೀಡುವ ಕೆಲಸವನ್ನ ಕೆಎಂಎಫ್ ಮಾಡಲಿದೆ. ಚರ್ಮಗಂಟು ರೋಗದಿಂದ ಹಾಲು ಕಡಿಮೆಯಾಗಿತ್ತು. ಹೀಗಾಗಿ ತುಪ್ಪದ ಕೊರತೆ ಉಂಟಾಗಿತ್ತು ಎಂದು ಮಾಹಿತಿ ನೀಡಿದರು. ಹಿರಿಯರ ಶ್ರಮದ ಫಲವಾಗಿ ಕೆಎಂಎಫ್ ಈ ಮಟ್ಟಕ್ಕೆ ಬೆಳೆದಿದೆ. ಸರ್ಕಾರದ ಮಾರ್ಗದರ್ಶನ, ಗ್ರಾಹಕರ ಸಹಕಾರ ಬೇಕು, ನಂದಿನಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದೆ, ಖಾಸಗಿ ಕಂಪನಿಗಳಿಗೆ ಸ್ಪರ್ಧೆ ನೀಡುತ್ತೇವೆ ಎಂದು ಹೇಳಿದರು.