ನದಿಗಿಳಿದ ಸರ್ಕಾರಿ ವೈದ್ಯನ ದುರಂತ ಸಾವು

0
8

ಹಾಸನ: ಸರ್ಕಾರಿ ವೈದ್ಯರೊಬ್ಬರು ಹೇಮಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಖೋನಾಪುರದಲ್ಲಿ ನಡೆದಿದೆ. ಹೇಮಾವತಿ ನದಿ ಹಿನ್ನೀರಿನ ರಂಗನಾಥಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಲು ತೆರಳಿದ್ದ ಚಂದ್ರಶೇಖರ್, ನದಿಯಲ್ಲಿ ಸ್ನಾನ ಮಾಡಿ ಪೂಜೆ ಸಲ್ಲಿಸುತ್ತಿದ್ದ ವೇಳೆ ನದಿಗೆ ಇಳಿದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಹಲವು ವರ್ಷಗಳಿಂದ ಹೇಮಾವತಿ ನದಿಯಲ್ಲಿ ಸ್ನಾನ ಮಾಡಿ ಪೂಜೆ ಸಲ್ಲಿಸುತ್ತಿದ್ದರು. ಇದೀಗ ನದಿ ನೀರು ಸಂಪೂರ್ಣ ಕಡಿಮೆಯಾಗಿದ್ದರಿಂದ ಸ್ನಾನಕ್ಕೆಂದು ನದಿಗೆ ಇಳಿದ ವೇಳೆ ಆಳ ಅರಿಯದೆ ನೀರಿನಲ್ಲಿ ಮುಳುಗಿ ಚಂದ್ರಶೇಖರ್​ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleತಾಯಿ-ಮಗುವಿನ ಆರೋಗ್ಯ ಬೇಕಿದೆ ಮೂಢನಂಬಿಕೆಗೆ ವಿದಾಯ
Next articleಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು