ಬೆಂಗಳೂರು: ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ಟರೂ ಕೊಡದಿದ್ದರೂ ತಲೆಕೆಡಿಸಿಕೊಳ್ಳಲ್ಲ ಎಂದು ಜೆಡಿಎಸ್ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇಂದಿನಿಂದ ಎರಡು ದಿನಗಳ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿವೆ. ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ ನಡೆದಿದ್ದು. ಈ ಬಾರಿ ಬಿಜೆಪಿಯನ್ನು ಮಣಿಸಲು ವಿಪಕ್ಷಗಳು ಒಗ್ಗಟ್ಟಾಗಿ ಇಂದು ಸಭೆ ಸೇರಿದ್ದಾರೆ. ಎನ್‍ಡಿಎ ಮೈತ್ರಿ ಸೇರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ಚರ್ಚೆ ಮಾಡಲು ಇನ್ನೂ ಕಾಲಾವಕಾಶವಿದೆ. ಲೋಕಸಭೆ ಚುನಾವಣೆಗೆ ಇನ್ನೂ 8-10 ತಿಂಗಳು ಇರುವಾಗ ಈಗಲೇ ಚರ್ಚೆ ಮಾಡುವುದು ಸಕಾಲವಲ್ಲ, ಇನ್ನು ಈ ಸಭೆಗೆ ಜೆಡಿಎಸ್ಗೆ ಆಹ್ವಾನ ಕೊಟ್ಟಿಲ್ಲ. ಇನ್ನು ಈ ಬಗ್ಗೆ ಸ್ವತಃ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಮಹಾಘಟಬಂಧನ್ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ. ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿ ಮಹಾಘಟಬಂಧನ್ ಇದೆ. ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ಟರೂ ಕೊಡದಿದ್ದರೂ ತಲೆಕೆಡಿಸಿಕೊಳ್ಳಲ್ಲ ಎಂದು ಸ್ಪಷ್ಟಪಡಿಸಿದರು. ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ. ಮುಂದೆ ನೋಡೋಣ. ನನ್ನ ಪಕ್ಷ ಸಂಘಟನೆ ಏನಿದೆ, ನಾಡಿನ ಸಮಸ್ಯೆ ಏನಿದೆ ಅದನ್ನ ನೋಡುತ್ತಿದ್ದೇನೆ ಎಂದರು.
