Home News ನರಭಕ್ಷಕ ಹುಲಿ ಸೆರೆ

ನರಭಕ್ಷಕ ಹುಲಿ ಸೆರೆ

ಮಡಿಕೇರಿ: ಕೊಡಗಿನ ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಇಲ್ಲಿನ ಕೆ.ಬಾಡಗ ಗ್ರಾಮದ ಚೂರಿಕಾಡು ಎಂಬಲ್ಲಿ 24 ಗಂಟೆಯಲ್ಲಿ ಒಂದೇ ಮನೆಯ ಇಬ್ಬರ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಹುಲಿಯನ್ನು ಸೆರೆ ಹಿಡಿಯಲು ಬೆಳಗ್ಗೆಯಿಂದಲೇ 5 ಸಾಕಾನೆಗಳ ಸಹಕಾರದೊಂದಿಗೆ 150ಕ್ಕೂ ಅಧಿಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ ಪತ್ತೆಯಾಗಿರಲಿಲ್ಲ. ಮಧ್ಯಾಹ್ನದ ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿಗೆ ಆಪರೇಷನ್ ಟೈಗರ್ ಆರಂಭಿಸಿ ಹುಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Exit mobile version