ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ

0
23
ಸಿಟಿ ರವಿ

ಬೆಂಗಳೂರು: ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ಯಾವಾಗಲೂ ಕಾರ್ಯಕರ್ತ. ಆಗಲೂ, ಈಗಲೂ ನಾನು ಕಾರ್ಯಕರ್ತ. ಈಗಲೂ ಅದೇ ಸೇವಾಭಾವದಿಂದ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.
ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಅವರು, ರಾಜ್ಯಾಧ್ಯಕ್ಷ ಸ್ಥಾನ ಅನ್ನೋದು ಒಂದು ದೊಡ್ಡ ಜವಾಬ್ದಾರಿ. ಅದನ್ನು ಕೇಳಿ ಪಡೆಯಲು ಆಗಲ್ಲ. ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಕೊಡಬೇಕು, ಯಾವಾಗ ಕೊಡಬೇಕು ಅಂತ ದೊಡ್ಡವರು ನಿರ್ಧಾರ ಮಾಡುತ್ತಾರೆ. ವರಿಷ್ಠರು ಯಾವ ಜವಾಬ್ದಾರಿ ಕೊಟ್ಟರೂ ನಾನು ನಿಭಾಯಿಸುತ್ತೇನೆ ಎಂದರು.

Previous articleಸಮಾಜಘಾತುಕ ಶಕ್ತಿಗಳಿಗೆ ಸರ್ಕಾರದ ಬೆಂಬಲ: ಬೊಮ್ಮಾಯಿ
Next articleಅರಿಶಿನಗುಂಡಿ ಫಾಲ್ಸ್​ನಲ್ಲಿ ಬಿದಿದ್ದ ಶರತ್‌ ಮೃತದೇಹ ಪತ್ತೆ