ಬೆಂಗಳೂರು: ನಾನೇ ಗೃಹಲಕ್ಷ್ಮೀಯನ್ನ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ಯೋಜನೆ ಅನುಷ್ಠಾನಕ್ಕೆ ತರುತ್ತೇವೆ. ಅರ್ಜಿಯನ್ನ ಪ್ರತಿಯೊಬ್ಬರೂ ಉಚಿತವಾಗಿ ಸಲ್ಲಿಸುವಂತೆ ಮಾಡಿಕೊಡಬೇಕು. ಹೀಗಾಗಿ ಗಲಾಟೆ ಕಡಿಮೆ ಮಾಡಲು ಹೀಗೆ ಮಾಡಿದ್ದೇನೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಗೃಹಲಕ್ಷ್ಮಿಯನ್ನ ನಾನೇ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ ಎಂದರು.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೇ ಸಂಘ ಸಂಸ್ಥೆಗಳು ಹಣ ವಸೂಲಿ ಮಾಡಿದ್ರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಅವರ ಏಜೆನ್ಸಿಯನ್ನೇ ರದ್ದು ಮಾಡಲಾಗುವುದು. ಯಾರೇ ಲಂಚ ಕೇಳಿದ್ರೆ ನಾವು ಒಂದು ಸಹಾಯವಾಣಿ ಸಂಖ್ಯೆ ಕೊಡ್ತೀವಿ, ಅದಕ್ಕೆ ಕಾಲ್ ಮಾಡಿ ದೂರು ನೀಡಿ ಎಂದು ತಿಳಿಸಿದರು.