ನಾಮಪತ್ರ ಸಲ್ಲಿಸಿದ ಶಾಸಕ ಬಯ್ಯಾಪುರ

0
23

ಕುಷ್ಟಗಿ: ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಮರೇಗೌಡ ಪಾಟೀಲ್ ಬಯ್ಯಾಪುರ ಚುನಾವಣಾ ಅಧಿಕಾರಿ ಚಿದಾನಂದಪ್ಪ ಅವರಿಗೆ ನಾಮಪತ್ರ ಸಲ್ಲಿಸಿದರು.
ಬೆಳಿಗ್ಗೆ 11.50 ಸುಮಾರಿಗೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಮಾಜಿ ಶಾಸಕ ಹಾಗೂ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಹಸನಸಾಬ ದೋಟಿಹಾಳ ಯಲಬುರ್ಗಿ ಹಾಗೂ ಪಕ್ಷದ ಮುಖಂಡರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರು.
ನಂತರ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಮಾತನಾಡಿ, ನಾನು ಎರಡು ಬಾರಿ ಶಾಸಕನಾಗಿ ಆಯ್ಕೆಯಾದ ಮೇಲೆ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ ಹೀಗಾಗಿ ನನ್ನನು ಕ್ಷೇತ್ರದ ಜನತೆ ಮತ್ತೊಮ್ಮೆ ಶಾಸಕರನ್ನಾಗಿ ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸ ನನಗೆ ದಟ್ಟವಾಗಿದೆ ಎಂದರು.

Previous articleಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಎಸ್.ಐ.ಚಿಕ್ಕನಗೌಡರ
Next articleಧಾರವಾಡ: ಜಿಲ್ಲೆಯಲ್ಲಿ ಬಿರುಸು ಪಡೆದ ನಾಮಪತ್ರ ಸಲ್ಲಿಕೆ