Home ತಾಜಾ ಸುದ್ದಿ ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು‌ ರೈತರಿಂದ ಹೆದ್ದಾರಿ ತಡೆ

ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು‌ ರೈತರಿಂದ ಹೆದ್ದಾರಿ ತಡೆ

0

ಶ್ರೀರಂಗಪಟ್ಟಣ: ಕೃಷಿ ಬೆಳೆ ಸಂರಕ್ಷಣೆ ಹಾಗೂ‌ ಜನ- ಜಾನುವಾರುಗಳ ರಕ್ಷಣೆಗಾಗಿ ಸರ್ಕಾರ ಶೀಘ್ರವಾಗಿ ಎಲ್ಲಾ ನಾಲೆಗಳಿಗೂ ನೀರು ಹರಿಸಬೇಕೆಂದು ನೂರಾರು ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಶ್ರೀರಂಗಪಟ್ಟಣದ ಕುವೆಂಪು ವೃತ್ತದ ಬಳಿಯ ಬೆಂಗಳೂರು- ಮೈಸೂರು‌ ಹೆದ್ದಾರಿ ತಡೆದು, ಶೀಘ್ರವಾಗಿ‌ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿದರು. ಸಕಾಲಕ್ಕೆ ಮಳೆಯಾಗದ ಹಿನ್ನೆಲೆ ಈಗಾಗಲೇ ಕೃಷಿ ಚಟುವಟಿಕೆಗಳು ಕುಂಟಿತಗೊಂಡಿವೆ. ಇನ್ನು ಬೆಳೆದಿರುವ ಬೆಳೆಗಳ ರಕ್ಷಣೆಗಾದರೂ ನಾಲೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟಕ್ಕೆ ರೈತರು ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Exit mobile version