Home ತಾಜಾ ಸುದ್ದಿ ನಾಲ್ಕು ಸಾವಿರ ಕೂಸಿನ ಮನೆ

ನಾಲ್ಕು ಸಾವಿರ ಕೂಸಿನ ಮನೆ

0

ಬೆಂಗಳೂರು: ನಾಲ್ಕು ಸಾವಿರ ಕೂಸಿನ ಮನೆಗಳನ್ನು ತೆರೆಯುವ ಕೆಲಸವನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2023- 24 ನೇ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಅನುಷ್ಠಾನದ ಕುರಿತು ನಡೆದ ಚರ್ಚೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ ಅವರು ವರುಣಾ ಕ್ಷೇತ್ರದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಎಷ್ಟು ಕಾಮಗಾರಿಗಳು , ಎಷ್ಟು ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ ಎಂದು ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿ, ವರದಿ ಸಲ್ಲಿಸಬೇಕು. ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಾಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ, ಸಂವಿಧಾನ ಅಧ್ಯಯನ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯಗಳನ್ನು ನೀಡಲಾಗುವ ಯೋಜನೆಯನ್ನು ಉತ್ತಮವಾಗಿ ಕಾರ್ಯಗತಗೊಳಿಸಬೇಕು. ವಾರಾಂತ್ಯದಲ್ಲಿಯೂ ಗ್ರಂಥಾಲಯಗಳನ್ನು ತೆರೆದರೆ ವಿದ್ಯಾರ್ಥಿಗಳಿಗೆ, ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅನುಕೂಲವಾಗುತ್ತದೆ. ಮೂರು ವರ್ಷಗಳಲ್ಲಿ ಇದನ್ನು ಜಾರಿ ಮಾಡಬೇಕು. ಆಯವ್ಯಯದಲ್ಲಿ ಹೇಳಿರುವಂತೆ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಹಾಗೂ ಆರು ವರ್ಷದ ಒಳಗಿನ ಮಕ್ಕಳ ಆರೋಗ್ಯ, ಪೌಷ್ಟಿಕತೆ ಮತ್ತು ಸುರಕ್ಷತೆಗಾಗಿ ಕೂಸಿನ ಮನೆ ಹೆಸರಿನಲ್ಲಿ ನಾಲ್ಕು ಸಾವಿರ ಕೂಸಿನ ಮನೆಗಳನ್ನು ತೆರೆಯುವ ಕೆಲಸವನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಬೇಕು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣಗಳ ನಿರ್ಮಾಣ ಕಾರ್ಯವನ್ನು ತಲಾ 25 ಲಕ್ಷಗಳ ವೆಚ್ಚದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯಗತ ಮಾಡಬೇಕು ಎಂದರು.

Exit mobile version