ನಾಳೆ ದಸರಾ ಉದ್ಘಾಟನೆಗೆ ರಾಷ್ಟ್ರಪತಿ, ಎಲ್ಲ ಸಿದ್ಧತೆ ಪೂರ್ಣ: ಸಚಿವ ಸೋಮಶೇಖರ್‌

0
33
ನಾಡಹಬ್ಬ ದಸರಾ

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಆಗಮಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಕಚೇರಿಯಿಂದ ಬಂದ ಸೂಚನೆಯಂತೆ ವ್ಯವಸ್ಥೆ ಮಾಡಲಾಗಿದ್ದು, ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದರು.
ನಾಳೆ ಮುಂಜಾನೆ 9 ಗಂಟೆಗೆ ಮೈಸೂರಿಗೆ ಆಗಮಿಸುವ ರಾಷ್ಟ್ರಪತಿಗಳು ಮೊದಲು ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ. ಬಳಿಕ ವೇದಿಕೆಗೆ ಆಗಮಿಸಿ ದಸರಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವೇದಿಕೆಯಲ್ಲಿ 13 ಗಣ್ಯರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದ್ದು, ಸಾವಿರಕ್ಕೂ ಅಧಿಕ ಮಂದಿ ಕಾರ್ಯಕ್ರಮ ವೀಕ್ಷಿಸಬಹುದು ಎಂದರು.

Previous articleಅರ್ಥಪೂರ್ಣ, ವೈಭವಪೂರ್ಣ ದಸರಾ ಆಚರಣೆ: ಸಿಎಂ
Next articleಎಸ್.ಎಂ ಕೃಷ್ಣ ಆರೋಗ್ಯವಾಗಿದ್ದಾರೆ: ಸಿಎಂ