ನಾಳೆ ರಾಜ್ಯಕ್ಕೆ ರಾಹುಲ್ ಗಾಂಧಿ

0
32
ರಾಹುಲ್‌

ವಿಜಯಪುರ: ‌ನಾಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಜಾನೆ ವಿಮಾನ ಮೂಲಕ ಹುಬ್ಬಳ್ಳಿಗೆ ಆಗಮಿಸಲಿರುವ ಅವರು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಯ ಕೂಡಲಸಂಗಮ ಕ್ಷೇತ್ರಕ್ಕೆ ಬರಲಿದ್ದಾರೆ. ಬಳಿಕ ಕೂಡಲಸಂಗಮ ದೇವಸ್ಥಾನ ಹಾಗೂ ಬಸವಣ್ಣನವರ ಐಕ್ಯ ಮಂಟಪ ದರ್ಶನ ಮಾಡಿ, ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಸಂಜೆ 4.25ಕ್ಕೆ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ತೆರಳಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಹಾಗೂ ರೋಡ ಶೋ ನಡೆಸಲಿದ್ದಾರೆ. ರಾತ್ರಿ ವಿಜಯಪುರದಲ್ಲಿ ವಾಸ್ತವ್ಯ ಹೂಡಿ ಮರುದಿನ ದೆಹಲಿಗೆ ಪ್ರಯಾಣಿಸಲಿದ್ದಾರೆ ಎಂದರು.

Previous articleಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ
Next articleಮುಸ್ಲಿಂ ಬಾಂಧವರಿಗೆ ಮಂತ್ರಾಲಯ ಶ್ರೀಗಳಿಂದ ಆಶೀರ್ವಾದ