ನಾಳೆ ರಾಜ್ಯಾದ್ಯಂತ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ

0
16

ರಾಜ್ಯ ವಿಧಾನಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಬಜರಂಗದಳ ನಿಷೇಧಿಸುವ ಪ್ರಸ್ತಾಪ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದು, ಇದಕ್ಕೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್‌ನ ಈ ನಡೆಗೆ ಬಜರಂಗದಳ ಮತ್ತು ಹಿಂದೂ ಸಂಘಟನೆಗಳು ಕಾಂಗ್ರೆಸ್‌ಗೆ ಠಕ್ಕರ್‌ ಕೊಡಲು ಮುಂದಾಗಿವೆ.
ನಾಳೆ ಸಂಜೆ 7 ಗಂಟೆಗೆ ರಾಜ್ಯದಾದ್ಯಂತ ಸಾಮೂಹಿಕ ಹನುಮಾನ್ ಚಾಲೀಸಾ ಪಠಣವನ್ನು ಆಯೋಜಿಸಿದೆ. ಇದು ಧರ್ಮಕ್ಕೆ ಸಂಕಟವಾಗಿರುವ ಸಮಯ. ಇದಕ್ಕೆ ಎಲ್ಲರೂ ಒಟ್ಟಾಗಿ ನಿಲ್ಲುವುದೊಂದೇ ಪರಿಹಾರ. ನಮ್ಮೆಲ್ಲ ಭೇದಗಳನ್ನು ಬದಿಗಿಟ್ಟು ಧರ್ಮರಕ್ಷಣೆಗೆ ಜೊತೆಯಾಗೋಣ, ಕೈ ಜೋಡಿಸೋಣ ಎಂದು ಕರೆ ಕೊಟ್ಟಿದೆ.

Previous articleವರುಣಾದಲ್ಲಿ ನಾಳೆ ತಾರಾ ರಂಗು
Next articleಎರಡನೇ ಸುತ್ತಿನ ಪ್ರಚಾರ ಮುಗಿಸಿ ದೆಹಲಿಯತ್ತ ಮೋದಿ