ಬೆಂಗಳೂರು: ನಿಫಾ ವೈರಸ್ ಪ್ರಕರಣ ತೀವ್ರವಾಗುತ್ತಿದ್ದಂತೆ ಕೇರಳದಲ್ಲಿ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಾಜ್ಯದಲ್ಲಿ ಸಹ ನಿಫಾ ವೈರಸ್ ಆತಂಕ ಹಿನ್ನೆಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಈಗ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ದಕ್ಷಿಣ ಕನ್ನಡದ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಶಂಕಿತ ಪ್ರಕರಣಗಳನ್ನು ದಾಖಲಿಸಿಕೊಂಡು, ಚಿಕಿತ್ಸೆ ನೀಡಬೇಕು ಎಂದು ಸುತ್ತೋಲೆಯಲ್ಲಿ ದಕ್ಷಣ ಕನ್ನಡ ಜಿಲ್ಲೆಗೆ ಹೆಚ್ಚಿನ ಅಲರ್ಟ್ಗೆ ಸೂಚಿಸಿದೆ. ಶಂಕಿತ ಪ್ರಕರಣದ ಕುರಿತು ಕಣ್ಗಾವಲು ಕಚೇರಿಗೆ ಮಾಹಿತಿ ನೀಡಬೇಕು. ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ 10 ಹಾಸಿಗೆಯ ವಾರ್ಡ್ಗಳನ್ನು ತೆರೆಯಬೇಕು ಎಂದು ಸುತ್ತೋಲೆ ಹೊರಡಿಸಿದೆ.