ನಿಮ್ಮ ಹೋಲಿಕೆಗೆ ಕ್ರಮ ಅನ್ವಯವಾಗುವುದಿಲ್ಲವೇ?

0
13

ಬೆಂಗಳೂರು: ನಿಮ್ಮ ಹೋಲಿಕೆಗೆ ಕ್ರಮ ಅನ್ವಯವಾಗುವುದಿಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಅವರು ವಿರೋಧ ಪಕ್ಷಗಳಿಗೆ ಸರಿಯಾದ ದಿಕ್ಕೇ ಇಲ್ಲ ಎಂದು ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ. ಅವರು ತಮ್ಮ ಸಂದೇಶದಲ್ಲಿ “ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರೇ. ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ? ಲಲಿತ್ ಮತ್ತು ನೀರವ್ ಹೆಸರಲ್ಲಿಯೂ ಮೋದಿ ಇದೆಯಲ್ಲಾ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ, ಎರಡು ವರ್ಷ ಜೈಲು ಶಿಕ್ಷೆ ನೀಡಿ, ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಈಗ ಇಂಡಿಯಾವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್‌ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ರಾಹುಲ್ ಗಾಂಧಿಯವರ ವಿರುದ್ಧದ ಕ್ರಮ ಅನ್ವಯವಾಗುವುದಿಲ್ಲವೇ?
ಪ್ರಧಾನಿ ನರೇಂದ್ರ ಮೋದಿ ಅವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ? ಎಂದು ಪ್ರಶ್ನಿಸಿದ್ದಾರೆ.

Previous articleಬೆಣ್ಣೆ ಹಳ್ಳ ಪ್ರವಾಹ: ಶಾಶ್ವತ ಪರಿಹಾರದ ಭರವಸೆ
Next articleಗೃಹ ಲಕ್ಷ್ಮಿ ಯೋಜನೆ ನೋಂದಣಿ ಮತ್ತಷ್ಟು ಸರಳ: ಎಸ್‌ಎಂಎಸ್‌ಗೆ ಕಾಯಬೇಕಿಲ್ಲ