ನೀಟ್ ಪರೀಕ್ಷೆ: ಮೋದಿ ರೋಡ್ ಶೋ ಕೊಂಚ ಬದಲಾವಣೆ

0
13

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ.6 ಮತ್ತು 7 ರಂದು ಎರಡು ದಿನಗಳ ಕಾಲ ರಾಜ್ಯ ರಾಜಧಾನಿಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಬೆಂಗಳೂರು, ನಮ್ಮ ಹೆಮ್ಮೆ ಹೆಸರಿನಲ್ಲಿ ಎರಡು ದಿನಗಳ ಕಾಲ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರ ಪೂರ್ವಭಾವಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಧಾನಿ ಮೋದಿಯವರ ರೋಡ್ ಶೋ ಕುರಿತು ಮಾಹಿತಿ ನೀಡಿದರು. ಭಾನುವಾರ ನೀಟ್ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ರೋಡ್ ಶೋದಿಂದಾಗಿ ಅನಾನುಕೂಲತೆ ಎದುರಿಸಬೇಕಾಗುತ್ತದೆ. ಹೀಗಾಗಿ ಪರೀಕ್ಷೆಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಪಕ್ಷವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದಿದ್ದಾರೆ.

Previous articleಬಜರಂಗ ದಳ ನಿಷೇಧದ ಬಗ್ಗೆ ಜಗದೀಶ ಶೆಟ್ಟರ ನಿಲುವೇನು
Next articleಬಜರಂಗಬಲಿ ಆಕ್ರೋಶಕ್ಕೆ ಕಾಂಗ್ರೆಸ್ ಸುಟ್ಟು ಬೂದಿಯಾಗುತ್ತೆ