Home Advertisement
Home ತಾಜಾ ಸುದ್ದಿ ನೀತಿ ಸಂಹಿತೆ ಎಫೆಕ್ಟ್: ಕಾಶಿ ದರ್ಶನ ಯಾತ್ರೆ ರದ್ದು

ನೀತಿ ಸಂಹಿತೆ ಎಫೆಕ್ಟ್: ಕಾಶಿ ದರ್ಶನ ಯಾತ್ರೆ ರದ್ದು

0
114
ಕಾಶಿ ದರ್ಶನ

ರಾಜ್ಯ ಸರ್ಕಾರವು ‘ಭಾರತ ಗೌರವ ಕಾಶಿ ದರ್ಶನ’ ಯೋಜನೆಯಡಿಯಲ್ಲಿ ವಾರಣಾಸಿ ಮತ್ತು ಅಯೋಧ್ಯೆಗೆ ತನ್ನ ಪ್ರಮುಖ ತೀರ್ಥಯಾತ್ರೆ ಕಾರ್ಯಕ್ರಮವನ್ನು ರದ್ದುಗೊಳಿಸಿದೆ. ಏಪ್ರಿಲ್ 14 ಮತ್ತು 28 ರಂದು ಎರಡು ಬ್ಯಾಚ್‌ಗಳಲ್ಲಿ ಯಾತ್ರೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ, ಚುನಾವಣಾ ಆಯೋಗದ ನಿರ್ದೇಶನದ ನಂತರ ಯಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ಕಾರ್ಯಕ್ರಮವನ್ನು ಆಯೋಜಿಸುವ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಚ್ 29 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಬುಕಿಂಗ್ ಅನ್ನು ತಕ್ಷಣವೇ ನಿಲ್ಲಿಸುವಂತೆ ಚುನಾವಣಾ ಆಯೋಗವು ಏಪ್ರಿಲ್ 14 ರಂದು ತನ್ನ ಪತ್ರದಲ್ಲಿ ಸೂಚಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಮಾರ್ಚ್​-29 ರಂದು ಕರ್ನಾಟಕ ವಿಧಾನ ಸಭೆಗೆ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದು, ಅಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿರುತ್ತದೆ. ಈ ಪ್ರವಾಸಕ್ಕೆ ಚುನಾವಣಾ ಆಯೋಗದಿಂದ ಅನುಮತಿ ದೊರೆಯದ ಕಾರಣ ಸದರಿ ಪ್ರವಾಸಗಳನ್ನು ರದ್ದುಪಡಿಸಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ತಿಳಿಸಿದೆ.

Previous articleನನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ
Next articleಕೋಲಾರದಲ್ಲಿ ರಾಹುಲ್‌