Home ತಾಜಾ ಸುದ್ದಿ ನುಸುಳುಕೋರರಿಗೆ ಕೇಂದ್ರದಿಂದ ತಕ್ಕ ಉತ್ತರ

ನುಸುಳುಕೋರರಿಗೆ ಕೇಂದ್ರದಿಂದ ತಕ್ಕ ಉತ್ತರ

0

ಹುಬ್ಬಳ್ಳಿ: ನುಸುಳುಕೋರರ ಪ್ರಚೋದನೆಯಿಂದ ಮಣಿಪುರದಲ್ಲಿ ಜಾತಿ, ಧರ್ಮಗಳ ನಡುವೆ ಸಂಘರ್ಷ ಉಂಟಾಗುತ್ತಿದ್ದು, ಕೇಂದ್ರ ಸರ್ಕಾರ ತಕ್ಕ ಉತ್ತರ ಕೊಡಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಆದಾಯ ತೆರಿಗೆ ಇಲಾಖೆಯ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ರೋಜಗಾರ್ ಮೇಳ ಉದ್ಘಾಟನೆಗೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರ ಮಾಡಿದ ತಪ್ಪುಗಳಿಂದ ಭಾರತದ ಈಶ್ಯಾನ್ಯ ಭಾಗದಲ್ಲಿ ನುಸುಳುಕೋರರು ಸೇರಿದ್ದಾರೆ. ನುಸುಳುಕೋರರು ವಿದ್ರೋಹಿ ಚಟುವಟಿಕೆ ನಡೆಸಿ, ದೇಶದ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಈಶ್ಯಾನ್ಯ ರಾಜ್ಯಗಳಲ್ಲಿ ಮತ್ತೆ ಶಾಂತಿ ನೆಲೆಸುವಂತೆ ಮಾಡುತ್ತೇವೆ. ಈ ಬಗ್ಗೆ ವಿರೋಧ ಪಕ್ಷಗಳು ರಾಜಕಾರಣ ಮಾಡುತ್ತಿವೆ. ಪಾರ್ಲಿಮೆಂಟ್‌ನಲ್ಲಿ ಚರ್ಚೆ ಮಾಡುವುದನ್ನು ಬಿಟ್ಟು ಬೀದಿಗೆ ಇಳಿದಿದ್ದಾರೆ. ಆದರೆ, ಭಾರತ ಸರ್ಕಾರ ದೇಶದ ರಕ್ಷಣೆಗೆ ಹಾಗೂ ವಿರೋಧ ಪಕ್ಷದವರಿಗೆ ಉತ್ತರಿಸಲು ಸಿದ್ಧವಿದೆ. ಕೇಂದ್ರ ಸರ್ಕಾರವನ್ನು ಕೆಟ್ಟದಾಗಿ ಬಿಂಬಿಸುವ ಕಾರ್ಯನಡೆಯುತ್ತಿರುವುದು ಸರಿಯಲ್ಲ ಎಂದರು.

Exit mobile version