ಚಳ್ಳಕೆರೆ: ತಾಲ್ಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಮುಸ್ಲಿಂ ಜಾಮಿಯಾ ಮಸೀದಿಯನ್ನು ಇಂದು ಶಾಸಕ ಟಿ. ರಘುಮೂರ್ತಿ ಅವರು ಉದ್ಘಾಟಿಸಿದರು. ಈ ಶುಭ ಸಮಾರಂಭದಲ್ಲಿ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಮಸೀದಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ರಘುಮೂರ್ತಿ, “ಧಾರ್ಮಿಕ ಕೇಂದ್ರಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಭ್ರಾತೃತ್ವವನ್ನು ಬೆಳೆಸಲು ಪ್ರಮುಖ ಪಾತ್ರ ವಹಿಸುತ್ತವೆ. ಎಲ್ಲಾ ಸಮುದಾಯಗಳು ಒಟ್ಟಾಗಿ ಬಾಳುವ ಮೂಲಕವೇ ನಾವು ಬಲಿಷ್ಠ ಸಮಾಜವನ್ನು ನಿರ್ಮಿಸಲು ಸಾಧ್ಯ” ಎಂದು ಹೇಳಿದರು. ಸಮಾಜದಲ್ಲಿ ಸಾಮರಸ್ಯದ ಅಗತ್ಯವನ್ನು ಅವರು ಒತ್ತಿ ಹೇಳಿದರು.
ಈ ಸಂದರ್ಭದಲ್ಲಿ ಮುಸ್ಲಿಂ ಜಾಮಿಯಾ ಮಸೀದಿಯ ಅಧ್ಯಕ್ಷರಾದ ಜನಾಬ್ ಎಂ. ರಷೀದ್ ಸಾಬ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಿ.ಪಿ. ಪ್ರಕಾಶ್ ಮೂರ್ತಿ, ಮುಖಂಡರಾದ ಚೆನ್ನಕೇಶವ ಸೇರಿದಂತೆ ಹಲವು ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.