ದೆಹಲಿ: ಮೇ 28ರಂದು ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್ ಭವನ ಉದ್ಘಾಟನಾ ಸಮಾಂಭವನ್ನು ದೇಶದ ಹಲವಾರು ಪಕ್ಷಗಳು ಬಾಯ್ಕಾಟ್ ಮಾಡಿವೆ.
ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳಿಂದ ಉದ್ಘಾಟಿಸಬೇಕು ಎಂದು ಕೆಲ ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದವು. ಆದರೆ, ಕೇಂದ್ರ ಸರ್ಕಾರ ಕಟ್ಟಡವನ್ನು ಪ್ರಧಾನ ಮಂತ್ರಿಯವರಿಂದಲೇ ಉದ್ಘಾಟಿಸಲು ಮುಂದಾಗಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳು ಕಾರ್ಯಕ್ರಮ ಬಹಿಷ್ಕರಿಸುವುದಾಗಿ ತಿಳಿಸಿವೆ.
ಹೊಸ ಸಂಸತ್ತಿನ ಉದ್ಘಾಟನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮಾಡಿಸದಿರುವ ಜತೆಗೆ ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರ ಜನ್ಮದಿನದಂದು ಸಂಸತ್ ಭವನ ಉದ್ಘಾಟನೆಗೆ ಮುಂದಾಗಿರುವುದನ್ನು ವಿರೋಧ ಪಕ್ಷಗಳು ವಿರೋಧಿಸಿವೆ.