ನೊರೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಬೇಕಾದ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ. ಕೊಳಚೆ ನೀರಿನಿಂದ ನೊರೆ ಸೃಷ್ಟಿಯಾಗಿ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಧಾರವಾಡದ ವಿವಿದ ಪ್ರದೇಶಗಳಿಗೆ ಭೇಟಿ ನೀಡಿದ ಅವರು “ನಮ್ಮ ಧಾರವಾಡ ನಗರದ ಹೊರ ವಲಯದಲ್ಲಿರುವ ಸಾಧುನವರ್ ಎಸ್ಟೇಟ್, ಗುರುನಗರ, ಹಿರೇಮಠ ಲೇಔಟ್ ಹಾಗೂ ಪಾಟೀಲ್ ಲೇಔಟ್ ನ ಕೆಲ ಪ್ರದೇಶಗಳಲ್ಲಿ ಹಳ್ಳದ ಕೊಳಚೆ ನೀರಿನಿಂದ ನೊರೆ ಸೃಷ್ಟಿಯಾಗಿ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ಈ ನೊರೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಬೇಕಾದ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದಿದ್ದಾರೆ.