ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ನೇಮಕ

0
13
ಸಿದ್ದರಾಮಯ್ಯ

ಬೆಂಗಳೂರು: ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ನೇಮಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು ಕೊರೊನಾ ಕಾಲದ ವೈದ್ಯಕೀಯ ಉಪಕರಣಗಳ ಖರೀದಿ, ಆಮ್ಲಜನಕ ನಿರ್ವಹಣೆ ಮತ್ತು ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಸೇರಿದಂತೆ 2021ರ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರ ಆರೋಪಗಳ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ನೇಮಿಸಲಾಗಿದೆ ಎಂದಿದ್ದಾರೆ.

Previous articleಕರ್ಮವೀರ ಪತ್ರಿಕೆಯ `ಪೂಜ್ಯಾಯ ರಾಘವೇಂದ್ರಾಯ’ ವಿಶೇಷ ಸಂಚಿಕೆ ಬಿಡುಗಡೆ
Next articleಶತಕ ಸಂಭ್ರಮ: ನಾಡಿನ ಜನತೆಗೆ ಧನ್ಯವಾದ ಹೇಳಿದ ಸಿಎಂ