Home ತಾಜಾ ಸುದ್ದಿ ಪಂಚಮಸಾಲಿ ಮೀಸಲಾತಿ ಮತ್ತೆ ಸದನದಲ್ಲಿ ಚರ್ಚೆ

ಪಂಚಮಸಾಲಿ ಮೀಸಲಾತಿ ಮತ್ತೆ ಸದನದಲ್ಲಿ ಚರ್ಚೆ

0
ಯತ್ನಾಳ

ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿಗಳ ಗಮನ ಸೆಳೆದರು.
ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಯತ್ನಾಳರಿಗೆ ಸುದೀರ್ಘ ಉತ್ತರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಈಗಾಗಲೇ ಹಿಂದುಳಿದ ವರ್ಗಗಳ ಆಯೋಗಕ್ಕೆ ಶಿಫಾರಸು ಮಾಡಲಾಗಿದ್ದು, ಆಯೋಗ ಈಗಾಗಲೇ 10ರಿಂದ 12 ಜಿಲ್ಲೆಗಳಿಗೆ ಭೇಟಿ ಕೊಟ್ಟಿದೆ. ಇನ್ನು ಹಲವು ಜಿಲ್ಲೆಗಳಿಗೆ ಭೇಟಿ ಕೊಟ್ಟು ಮಾಹಿತಿ ಪಡೆಯಬೇಕು. ಆದಷ್ಟು ಶೀಘ್ರ ವರದಿ ಸಲ್ಲಿಸಬೇಕೆಂದು ಆಯೋಗಕ್ಕೆ ಸೂಚನೆ ಕೊಟ್ಟಿದ್ದೇವೆ. ವರದಿ ನೀಡಿದ ನಂತರ ಕಾನೂನು ಬದ್ಧವಾಗಿ ಯಾರಿಗೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು. ವೈಜ್ಞಾನಿಕವಾಗಿ ಮಾಡಬೇಕಾಗಿರುವುದರಿಂದ ಸಮಯ ಬೇಕಾಗುತ್ತದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದರು.

Exit mobile version