ಪಂಚಾಯತ್ ಚುನಾವಣೆಗೆ ಮತದಾನ ಆರಂಭವಾದ ಬೆನ್ನಲ್ಲೇ ರಾಜ್ಯಾದ್ಯಂತ ಹಿಂಸಾಚಾರ ನಡೆದು 9 ಜನರು ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಚುನಾವಣೆಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗುತ್ತಿದ್ದಂತೆ ಹಿಂಸಾಚಾರ ಶುರುವಾಗಿದೆ. ಇನ್ನು ಕೂಚ್ಬೆಹರ್ ಜಿಲ್ಲೆಯಲ್ಲಿ ಮತದಾನದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮತಪೆಟ್ಟಿಗೆಯೊಂದಿಗೆ ಓಡಿ ಹೋಗಿರುವ ವಿಚಿತ್ರ ಘಟನೆ ನಡೆದಿದೆ. ಅಲ್ಲದೇ, ದಿನ್‌ಹಟಾದ ಬರನಾಚಿನಾ ಎಂಬಲ್ಲಿನ ಮತಗಟ್ಟೆಯಲ್ಲಿ ನಕಲಿ ಮತದಾನ ಮಾಡಿದ್ದಾರೆ ಎಂದು ಆರೋಪಿಸಿ, ಮತದಾರರು ಆಕ್ರೋಶ ವ್ಯಕ್ತಪಡಿಸಿ ಮತಪೆಟ್ಟಿಗೆಗೆ ಬೆಂಕಿ ಹಚ್ಚಿದ್ದಾರೆ.