ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ 5 ಪ್ರಕರಣಗಳಿಂದ ಹೈಕೋರ್ಟ್ ರಿಲೀಫ್ ನೀಡಿದೆ. ಕೋವಿಡ್-೧೯ ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಕಾಂಗ್ರೆಸ್ ನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿ ಆದೇಶಿಸಿದ್ದು ಕಾಯ್ದೆ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ್ದ ಆರೋಪದ ಮೇಲೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ 5 ಪ್ರಕರಣಗಳಿಂದ ಹೈಕೋರ್ಟ್ ರಿಲೀಫ್ ನೀಡಿದೆ.