ಪಂಡಿತ್ ದೀನ್ ದಯಾಳ ಉಪಾಧ್ಯಾಯ ದೇಶ ಕಂಡ ಅಪರೂಪದ ದೇಶಪ್ರೇಮಿ: ಸಿಎಂ ಬೊಮ್ಮಾಯಿ

0
19
ಪಂಡಿತ್ ದೀನ್ ದಯಾಳ ಉಪಾಧ್ಯಾಯ

ಬೆಂಗಳೂರು: ಪಂಡಿತ್ ದೀನ್ ದಯಾಳ ಉಪಾಧ್ಯಾಯ ಅವರು ದೇಶ ಕಂಡ ಅಪರೂಪದ ದೇಶಪ್ರೇಮಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬಿಬಿಎಂಪಿ ವಾರ್ಡ್ ನಂ. 9ರ ವಿರೂಪಾಕ್ಷಪುರದಲ್ಲಿರುವ ಉದ್ಯಾನವನಕ್ಕೆ ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ ಉದ್ಯಾನವನ ಎಂದು ನಾಮಕರಣ ಮಾಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿ ದೇಶಕ್ಕೆ ತನ್ನತನವಿದೆ, ತನ್ನದೇ ಆದ ಸಂಸ್ಕೃತಿ, ಸಂಸ್ಕಾರ, ಚಿಂತನೆ, ಬದುಕಿದೆ ಭಾರತೀಯರ ಬದುಕು, ಮೌಲ್ಯಗಳು, ಆದರ್ಶಗಳು ಬೇರೆ ದೇಶದವರಿಗಿಂತ ವಿಭಿನ್ನವಾಗಿದೆ ಎಂದು ಗಟ್ಟಿಯಾಗಿ ಪ್ರತಿಪಾದಿಸಿದ್ದು, ದೀನ್ ದಯಾಳ್ ಉಪಾಧ್ಯಾಯ ಅವರು. ಅಂತ್ಯೋದಯ ಪರಿಕಲ್ಪನೆ ನೀಡಿದರು. ಈ ಸಮಾಜದ ಕಟ್ಟಕಡೆಯ ವ್ಯಕ್ತಿ ಉದ್ಧಾರವಾಗಲು ಅಂತ್ಯೋದಯ ಕಾರ್ಯಕ್ರಮ ಆಗಲೇಬೇಕು ಎಂದರು. ಈ ದೇಶದ ಏಕತೆ, ಅಖಂಡತೆಯ ಬಗ್ಗೆ ಸದಾ ಕಾಲ ಚಿಂತನೆ ಮಾಡಿದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Previous articleಜನವರಿಯಲ್ಲಿ ಸರಕಾರಿ ನೌಕರರಿಗೆ ಪರಿಷ್ಕೃತ ವೇತನ: ಷಡಕ್ಷರಿ
Next articleಕಾಂಗ್ರೆಸ್ ಪಕ್ಷ ಅಧಃಪತನವಾಗುತ್ತಿದೆ: ಸಿಎಂ ಬೊಮ್ಮಾಯಿ