Home ತಾಜಾ ಸುದ್ದಿ ಪಕ್ಷ ನಿಷ್ಠೆ ಇದ್ದವರು ಅಧಿಕಾರದಾಸೆಗೆ ಬೇರೆ ಪಕ್ಷಕ್ಕೆ ಹೋಗಲ್ಲ

ಪಕ್ಷ ನಿಷ್ಠೆ ಇದ್ದವರು ಅಧಿಕಾರದಾಸೆಗೆ ಬೇರೆ ಪಕ್ಷಕ್ಕೆ ಹೋಗಲ್ಲ

0

ಹುಬ್ಬಳ್ಳಿ: ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ, ಪಕ್ಷ ನಿಷ್ಠರಾಗಿ ಇರುವವರು ಪಕ್ಷದಲ್ಲಿಯೇ ಇರುತ್ತಾರೆ. ಅಧಿಕಾರದ ಆಸೆಗೆ ಬೇರೆ ಪಕ್ಷಕ್ಕೆ ಹೋಗುವವರು ಹೋಗುತ್ತಾರೆ. ಇದು ದೌರ್ಭಾಗ್ಯ ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ನಾನು ಅಂದುಕೊಂಡಿದ್ದೇನೆ. ಈ ಕುರಿತು ಅವರೊಂದಿಗೆ ಮಾತನಾಡಿದ್ದು, ಪಕ್ಷ ತೊರೆಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಹಲವು ಅವಕಾಶಗಳನ್ನು ನೀಡಲಾಗಿದೆ ಎಂದರು.

Exit mobile version