ಬೆಂಗಳೂರು: ಈ ಶೈಕ್ಷಣಿಕ ವರ್ಷದಲ್ಲಿ ಪಠ್ಯಪುಸ್ತಕಗಳಲ್ಲಿ ಮಾಡಿರುವ ಬದಲಾವಣೆಗಳನ್ನು ಕಿರುಪುಸ್ತಕಗಳ ಮೂಲಕ ಶಿಕ್ಷಕರಿಗೆ ತಿಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಸೌದದಲ್ಲಿ ಶಿಕ್ಷಣ ಸಚಿ ಮಧು ಬಂಗಾರಪ್ಪ ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಮಾತನಾಡಿದ್ದಾರೆ. ಮಕ್ಕಳಿಗೆ ಈಗಾಗಲೇ ಪಠ್ಯ ಪುಸ್ತಕ ವಿತರಿಸಲಾಗಿದೆ. ಹೀಗಾಗಿ ಅವುಗಳನ್ನು ವಾಪಸ್ ಪಡೆದರೆ ಮತ್ತೆ ಕೋಟ್ಯಾಂತರ ರೂಪಾಯಿ ವೆಚ್ಚವಾಗುತ್ತದೆ. ಹೀಗಾಗಿ ಸಪ್ಲಿಮೆಂಟರಿ ಪುಸ್ತಕ ನೀಡಲಾಗುತ್ತದೆ. ಶಿಕ್ಷಣ ತಜ್ಞರ ಸಲಹೆ ಪಡೆದು ಸಪ್ಲಿಮೆಂಟರಿ ಪುಸ್ತಕ ನೀಡಲಾಗುತ್ತದೆ. ಇದರ ಜೊತೆಗೆ ಮಕ್ಕಳಿಗೆ ಯಾವ ಪಾಠ ಮಾಡಬೇಕು ಅನ್ನೋ ಮಾರ್ಗಸೂಚಿಯನ್ನು ಶಿಕ್ಷಕರಿಗೆ ನೀಡಲಾಗುತ್ತದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.