Home ತಾಜಾ ಸುದ್ದಿ ಪರಿಷತ್ ಚುನಾವಣೆ: ಶೆಟ್ಟರ್ ಸೇರಿ ಮೂವರು ಅವಿರೋಧ ಆಯ್ಕೆ

ಪರಿಷತ್ ಚುನಾವಣೆ: ಶೆಟ್ಟರ್ ಸೇರಿ ಮೂವರು ಅವಿರೋಧ ಆಯ್ಕೆ

0

ಬೆಂಗಳೂರು: ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಲಕ್ಷ್ಮಣ ಸವದಿ, ಆರ್. ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿತ್ತು.
ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 20 ಕೊನೆ ದಿನವಾಗಿತ್ತು ಮತ್ತು ನಾಮಪತ್ರ ವಾಪಸ್ ಪಡೆಯಲು ಜೂನ್ 23 ಕೊನೆಯ ದಿನವಾಗಿತ್ತು. ಆದರೆ ಯಾರೂ ನಾಮಪತ್ರ ಸಲ್ಲಿಸದೇ ಇದ್ದ ಕಾರಣದಿಂದ ಕಣದಲ್ಲಿ ಮೂವರೇ ಇದ್ದು ಈ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

Exit mobile version