Home ನಮ್ಮ ಜಿಲ್ಲೆ ಚಾಮರಾಜನಗರ ಪರೀಕ್ಷೆಯಲ್ಲಿ ಫೇಲ್:‌ ವಿದ್ಯಾರ್ಥಿನಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್:‌ ವಿದ್ಯಾರ್ಥಿನಿ ಆತ್ಮಹತ್ಯೆ

0

ಚಾಮರಾಜನಗರ: ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿಯೋರ್ವಳು ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರದಲ್ಲಿನ ಜೆಎಸ್‌ಎಸ್‌ ಹಾಸ್ಟೆಲ್‌ನಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೂಕಿನ ಮೂಡುಗೂರು ಗ್ರಾಮದ ವಿಜಯಲಕ್ಷ್ಮೀ ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ವಿಜ್ಞಾನ ವಿಭಾಗದ ಪಿಸಿಎಂಸಿ ವಿಷಯದ ನಾಲ್ಕು ವಿಷಯದಲ್ಲಿ ಫೇಲಾಗಿದ್ದರಿಂದ ಮನನೊಂದು ಹಾಸ್ಟೆಲ್‌ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

Exit mobile version