ಪಿಎಸ್​ಐ ಮರುಪರೀಕ್ಷೆಗೆ ಹೈಕೋರ್ಟ್ ಆದೇಶ

0
40

ಬೆಂಗಳೂರು: ಪಿಎಸ್‌ಐ ನೇಮಕಾತಿ ಹೊಸದಾಗಿ ಪರೀಕ್ಷೆ ನಡೆಸಲು ಹೈಕೋರ್ಟ್‌ ಅವಕಾಶ ಮಾಡಿಕೊಟ್ಟಿದೆ. ಮರು ಪರೀಕ್ಷೆಗೆ ಆದೇಶಿಸಿ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ನ್ಯಾಯಮೂರ್ತಿಗಳಾದ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಇದು ಮರುಪರೀಕ್ಷೆ ಬೇಡ, ಕಳಂಕಿತರನ್ನು ಹೊರತುಪಡಿಸಿ ನೇಮಕಾತಿ ಪಟ್ಟಿಯನ್ನು ಪ್ರಕಟಿಸಲು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಕೋರಿದ್ದ ಅಭ್ಯರ್ಥಿಗಳ ಪರ ದಾವೆಯನ್ನು ತಿರಸ್ಕರಿಸಲಾಗಿದೆ. ಈ ಹಿಂದೆ ವಿಚಾರಣೆಯನ್ನು ಪೂರ್ಣಗೊಳಿಸಿ, ತೀರ್ಪನ್ನು ನವೆಂಬರ್‌ 10ಕ್ಕೆ ನಿಗದಿ ಮಾಡಿತ್ತು.

Previous articleಅಧ್ಯಯನ ಮಾಡುವುದರಿಂದ ಬಂದ ಭಾಗ್ಯವೇನು?
Next articleರಾಜ್ಯದಲ್ಲಿ ಎರಿಶಾ ಇ ಮೊಬಿಲಿಟಿ