ಪೇ ಸಿಎಂ ಅಭಿಯಾನ-ಕಾಂಗ್ರೆಸ್ಸಿನದು ಡರ್ಟಿ ಪಾಲಿಟಿಕ್ಸ್: ಬೊಮ್ಮಾಯಿ

0
22
ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಪೇ ಸಿಎಂ ಅಭಿಯಾನ ಮಾಡುತ್ತಿರುವ ಕಾಂಗ್ರೆಸ್ಸಿನದ್ದು ಡರ್ಟಿ ಪಾಲಿಟಿಕ್ಸ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದಾದರೂ ವಿಚಾರವಿದ್ದರೆ, ನೇರವಾಗಿ ಮಾತಾಡಬೇಕು, ದಾಖಲೆ ನೀಡಬೇಕು ಹಾಗೂ ತನಿಖೆಯಾಗಬೇಕು. ಯಾವುದೇ ವಿಚಾರವಿಲ್ಲದೆ, ಪೂರ್ಣಪ್ರಮಾಣದ ತಯಾರಿ ಇಲ್ಲದೆ ಸದನಕ್ಕೆ ಬರುತ್ತಾರೆ. ಇದು ಅವರ ನೈತಿಕತೆಯ ಅಧಃಪತನ ತೋರುತ್ತದೆ. ನೈತಿಕತೆ ಇಲ್ಲದೆ ಹೆಸರು ಕೆಡಿಸುವ ಕಾರ್ಯಕ್ರಮವಿದು ಎಂದರು.
ಜನಪರ ಕಾಳಜಿ ಇಲ್ಲದೆ ಡರ್ಟಿ ಪಾಲಿಟಿಕ್ಸ್ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಇದೆಲ್ಲಾ ಕರ್ನಾಟಕದಲ್ಲಿ ಸಾಧ್ಯವಿಲ್ಲ. ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ ಎಂದರು.
ಲಿಂಗಾಯತ ಸಮುದಾಯದ ಮುಖ್ಯಮಂತ್ರಿಗಳನ್ನು ಗುರಿಯಾಗಿಸಲಾಗಿದೆ ಎಂದು ಸಚಿವ ಡಾ. ಕೆ.ಸುಧಾಕರ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ನಾನು ಅದರ ಭಾಗವಲ್ಲ. ಹಾಗಾಗಿ ಏನೋ ಹೇಳುವುದಿಲ್ಲ ಎಂದರು.

Previous articleವಿಘ್ನ ನಿವಾರಕ ವಿನಾಯಕನಿಗೆ ವಿದಾಯ
Next articleಬ್ಯಾಂಕ್‌ಗಳಿಂದ ರೈತರ ಆಸ್ತಿ ಜಪ್ತಿಗೆ ನಿಷೇಧ: ಸಿಎಂ ಬೊಮ್ಮಾಯಿ